Site icon Suddi Belthangady

ಬೆಳ್ತಂಗಡಿಯಲ್ಲಿ ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ನಳಿನ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು ಸಹಿತ ಸಾವಿರಾರು ಮಂದಿ ಭಾಗಿ

ಬೆಳ್ತಂಗಡಿ: ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳದ ಮಣ್ಣಸಂಕದಲ್ಲಿ‌ ಅತ್ಯಾಚಾರಕ್ಕೀಡಾಗಿ ಬರ್ಬರವಾಗಿ ಕೊಲೆಯಾಗಿರುವ ಧರ್ಮಸ್ಥಳ ಪಾಂಗಳ‌‌ ನಿವಾಸಿ, ಉಜಿರೆ ಎಸ್.ಡಿ.ಎಂ.ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯರವರ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆಗಸ್ಟ್ 27ರಂದು ಬೆಳ್ತಂಗಡಿಯ ತಾಲೂಕು ಕಚೇರಿ ಮುಂಭಾಗದಲ್ಲಿ ದ.ಕ. ಸಂಸದರಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯುತ್ತಿರುವ ದಕ್ಷಿಣ ಕನ್ನಡ ಮತ್ತು ಉಡುಪಿ‌ ಜಿಲ್ಲಾ ಬಿಜೆಪಿ ಶಾಸಕರ ಪ್ರತಿಭಟನೆಯಲ್ಲಿ ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು ಭಾಗವಹಿಸಿದ್ದಾರೆ. ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಭಾಗಿಯಾಗುವ ನಿರೀಕ್ಷೆ ಇದ್ದು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿ.ಸುನೀಲ್‌ ಕುಮಾರ್, ಶಾಸಕರಾದ ಹರೀಶ್ ಪೂಂಜ, ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಯಶ್ಪಾಲ್‌ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಭಾಗೀರಥಿ ಮುರುಳ್ಯ, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷ ಎಂ. ಸುದರ್ಶನ ಮೂಡಬಿದ್ರೆ, ಜಿ.ಪಂ.ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಸೌಜನ್ಯರವರ ತಾಯಿ ಕುಸುಮಾವತಿ ಚಂದಪ್ಪ ಗೌಡ ಸಹಿತ ಸಾವಿರಾರು ಮಂದಿ ಭಾಗವಹಿಸಿದ್ದಾರೆ. ವಂದೇ ಮಾತರಂ ಹಾಡಿನೊಂದಿಗೆ ಕಾರ್ಯಕ್ರಮ ಆರಂಭಗೊಂಡಿದೆ. ಸೌಜನ್ಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು

Exit mobile version