ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ರವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಬೇಟಿ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಳಾದ ಸತೀಶ್ ಕೆ ಬಂಗೇರ ಕಾಶಿಪಟ್ಣ ಮತ್ತು ಕೆ.ಎಮ್ ನಾಗೇಶ್ ಕುಮಾರ್ ಗೌಡ ಸ್ವಾಗತಿಸಿ ಗೌರವಿಸಿದರು. ನಂತರ ಸಚಿವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಬೇಕು.ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಯಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿ ಯೋಜನೆ ಗಳನ್ನು ಸರ್ಕಾರ ಜಾರಿ ಮಾಡುತ್ತದೆ ಎಂದರು.ಸಚಿವರು ಕಾರ್ಯಕರ್ತರ ಅಹವಾಲು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ದ.ಕ ಜಿಲ್ಲಾ ಎಸ್ ಸಿ ಘಟಕದ ಅಧ್ಯಕ್ಷರಾದ ಶೇಖರ್ ಕುಕ್ಕೆಡಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಹಳ್ಳಿಮನೆ, ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಜಗದೀಶ್ ಡಿ. ಮತ್ತು ಪಕ್ಷದ ಮುಂಚೂಣಿ ಘಟಕಗಳ ಅಧ್ಯಕ್ಷರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.