ಕಾರು ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ-ಬೈಕ್ ಸವಾರರಾದ ತಾ.ಪಂ.ಮಾಜಿ ಸದಸ್ಯ ಕೊಕ್ಕಡದ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

0

ನೆಲ್ಯಾಡಿ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಎಚ್‌ಪಿ ಪೆಟ್ರೋಲ್ ಬಂಕ್ ನ ಬಳಿ ಆಲ್ಟೋ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದ ಘಟನೆ ಇಂದು(ಆ.28) ಬೆಳಿಗ್ಗೆ ನಡೆದಿದೆ.ಬೈಕ್‌ ಸವಾರ ಕೊಕ್ಕಡ ನಿವಾಸಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಕಾಲಿಗೆ ತೀವ್ರವಾದ ಗಾಯವಾಗಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಲ್ಯಾಡಿಯಿಂದ ಮಂಗಳೂರಿಗೆ ತೆರಳುತ್ತಿರುವ ಅಲ್ಟೋ ಕಾರು ಹಾಗೂ ಪೆಟ್ರೋಲ್ ಬಂಕ್ ನಿಂದ ಪೆಟ್ರೋಲ್ ತುಂಬಿಸಿಕೊಂಡು ಬರುತ್ತಿದ್ದ ಬೈಕಿನ ಮಧ್ಯೆ ಅಪಘಾತ ಸಂಭವಿಸಿದೆ.ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here