ಉಜಿರೆ: ಶ್ರೀ.ಧ.ಮಂ.ಅ.ಸೆಕೆಂಡರಿ ಶಾಲೆ ಉಜಿರೆಯಲ್ಲಿ ಸ್ವಚ್ಚತೆ ಮತ್ತು ಆರೋಗ್ಯ ಕಾರ್ಯಕ್ರಮ ಆ.28ರಂದು ಜರಗಿತು.
ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರ ಉಜಿರೆಯ ನಿರೀಕ್ಷಣಾಧಿಕಾರಿ ಸ್ವತಂತ್ರ ರಾವ್ ರವರು ಆಗಮಿಸಿ ಪ್ರಸ್ತುತ ಈ ಸಂದರ್ಭದಲ್ಲಿ ಹರಡುತ್ತಿರುವ ಕೆಂಗಣ್ಣಿಗೆ ತೆಗೆದು ಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ, ವೈಯಕ್ತಿಕ ಸ್ವಚ್ಛತೆ ಹಾಗೂ ಆರೋಗ್ಯ ಸಂಬಂಧಿ ವಿಷಯಗಳ ಬಗ್ಗೆ ಮಹತ್ವಪೂರ್ಣ ಉಪನ್ಯಾಸ ನೀಡಿದರು.
ಆರೋಗ್ಯ ಸಮಸ್ಯೆ ಬಂದಾಗ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರಿಸಿವುದರ ಮೂಲಕ ಸಂವಾದದ ಮುಖೇನ ಹೆಚ್ಚಿನ ಮಾಹಿತಿ ನೀಡಿದರು.ಶಾಲಾ ಮುಖ್ಯೋಪಾಧ್ಯಾಯ ಸುರೇಶ್.ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.
ಶಾಲಾ ಅಧ್ಯಾಪಕವೃಂದ ಹಾಗೂ ವಿದ್ಯಾರ್ಥಿ ವೃಂದ ಕಾರ್ಯಕ್ರಮದ ಉಪಸ್ಥಿತರಿದ್ದರು.ವಿದ್ಯಾರ್ಥಿ ಸಂಕೇತ್ ಸ್ವಾಗತಿಸಿದರು.ವಿದ್ಯಾರ್ಥಿನಿ ಮಾನ್ಯ ವಂದನಾರ್ಪಣೆ ಮಾಡಿದರು.ವಿಜ್ಞಾನ ಶಿಕ್ಷಕಿ ಕುಮಾರಿ ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.
p>