ಕುವೆಟ್ಟು ಗ್ರಾ.ಪಂ ನ 2022-23ನೇ ಸಾಲಿನ ಜಮಾಬಂದಿ ಕಾರ್ಯಕ್ರಮ

0

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತ್‌ನ 2022-23ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಕು|ವಿದ್ಯಾ ವಲಯ ಅರಣ್ಯಾಧಿಕಾರಿ ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷ ಗಣೇಶ್ ಕೆ, ಇಂಜಿನಿಯರ್ ಸುಜಿತ್ ಉಪಸ್ಥಿತರಿದ್ದರು.

ವಾರ್ಷಿಕ ವರದಿಯನ್ನು ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲ್ಯಾನ್ ಹಾಗೂ ಜಮಾ ಖರ್ಚಿನ ವರದಿಯನ್ನು ಕಾರ್ಯದರ್ಶಿ ಸೇವಂತಿ ಎ ಮಂಡಿಸಿದರು.
ಸಭೆಯಲ್ಲಿ ಗ್ರಾ.ಪಂ ಸದ್ಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂಚಾಯತ್ ಸಿಬ್ಬಂದಿ ಆನಂದ ಕೋಟ್ಯಾನ್ ಸ್ವಾಗತಿಸಿ, ಪಂಚಾಯತ್ ಸದಸ್ಯ ನಿತಿನ್ ಕುಮಾರ್ ಧನ್ಯವಾದ ಮಡಿದರು.

LEAVE A REPLY

Please enter your comment!
Please enter your name here