ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಯಂ ಅ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

0

ಉಜಿರೆ: ಶ್ರೀ ಧ.ಮಂ.ಅ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಬದನಾಜೆಯ ಸ.ಉ.ಹಿ.ಪ್ರಾ.ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿದ್ದಾರೆ.

ವಿವಿಧ ಸ್ಪರ್ದೆಗಳಲ್ಲಿ ನಾಲ್ವರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದು, ಎರಡು ವಿದ್ಯಾರ್ಥಿಗಳು ದ್ವಿತೀಯ ಹಾಗೂ ನಾಲ್ಕು ವಿದ್ಯಾರ್ಥಿಗಳು ತೃತೀಯ ಸ್ಥಾನ ಗಳಿಸಿದ್ದಾರೆ.

ನಿಶಾನ್ಯ ಹಿರಿಯ ವಿಭಾಗದ ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಅಭಿನಯ ಗೀತೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, ನಿದೀಶ್ ಹಿರಿಯ ವಿಭಾಗದ ಲಘು ಸಂಗೀತ ಮತ್ತು ಭಕ್ತಿಗೀತೆ ಸ್ಪರ್ಧೆಗಳಲ್ಲಿ ದ್ವಿತೀಯ ಪ್ರಶಸ್ತ್ತಿ ಪಡೆದಿದ್ದಾರೆ.

ಭಾಗ್ಯಶ್ರೀ ಹಿರಿಯ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ತ್ರಿಷಾ ಕಿರಿಯ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಪ್ರಥಮ, ಅಶ್ವಿತ ಕಿರಿಯ ವಿಭಾಗದ ಚಿತ್ರಕಲೆಯಲ್ಲಿ ಪ್ರಥಮ ಪ್ರಶಸ್ತಿ ಪಡೆದಿರುತ್ತಾರೆ.

ಸಾಧಕ ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯಕ್ ಹಾಗೂ ಶಿಕ್ಷಕ ವರ್ಗದವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here