ಮಾಲಾಡಿ: ಕರ್ನಾಟಕ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಫಲಾನುಭವಿ ಮಹಿಳೆಯರಿಗೆ ನೇರ ಪ್ರಸಾರದಲ್ಲಿ ವೀಕ್ಷಿಸುವ ಅವಕಾಶವನ್ನು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಆ.30ರಂದು ಏರ್ಪಾಡು ಮಾಡಲಾಗಿತ್ತು.
ಈ ಬಗ್ಗೆ ಗ್ರಾಮ ಪಂಚಾಯತ್ ಆಗಮನ ದ್ವಾರದಲ್ಲಿ ತಳಿರು ತೋರಣಗಳಿಂದ ಮತ್ತು ರಂಗೋಲಿಗಳಿಂದ ಶೃಂಗರಿಸಿ ಹಬ್ಬದ ವಾತಾವರಣ ಕಲ್ಪಿಸಲಾಗಿತ್ತು.ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಆಗಮಿಸಿದ್ದು ಸಂತಸದಿಂದ ನೇರ ಪ್ರಸಾರದಲ್ಲಿ ವೀಕ್ಷಿಸಿದರು.
ಕಾರ್ಯಕ್ರಮದ ಯಶಸ್ಸಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್, ಉಪಾಧ್ಯಕ್ಷೆ ಸೆಲೆಸ್ಟಿನ್ ಡಿ.ಸೋಜ ಹಾಗೂ ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ.ರಾಜಶೇಖರ ರೈ ಹಾಗೂ ಸಿಬ್ಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಸಹಕರಿಸಿದ್ದರು.