ಪುಂಜಾಲಕಟ್ಟೆ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ.ಶಾಲೆಗೆ ಸಮಗ್ರ ಪ್ರಶಸ್ತಿ

0

ಮಡಂತ್ಯಾರು: ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನದಲ್ಲಿ ನಡೆದ ಪುಂಜಾಲಕಟ್ಟೆ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಾಥಮಿಕ ಹಂತದ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ ಹಿರಿಯ ವಿಭಾಗದ ಸಮಗ್ರ ಪ್ರಶಸ್ತಿಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಈ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುವ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಇವರಿಗೆ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here