Site icon Suddi Belthangady

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಎಸ್.ಡಿ.ಎಂ ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ಖಾಸಗಿ ಕಂಪನಿಗಳ ನೇಮಕಾತಿ ಪ್ರಕ್ರಿಯೆಗಳಿಗೆ ಪೂರಕವಾಗಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲ್ಯದ (Quantitative Aptitude) ಕುರಿತು ಹತ್ತು ದಿನಗಳ ತರಬೇತಿ ಕಾರ್ಯಾಗಾರನ್ನು ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡು ಕಾರ್ಯಕ್ರಮ ಪ್ರಾರಂಭಿಸಲಾಯಿತು.

ಈ ಕಾರ್ಯಾಗಾರದಲ್ಲಿ ಒಟ್ಟು 52 ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ.ಸಂಪನ್ಮೂಲ ವ್ಯಕ್ತಿಗಳಾಗಿ ಮನೋಹರ ಟಿ.ಜೆ ಭಾಗವಹಿಸಿ ಹತ್ತು ದಿನಗಳ ತರಬೇತಿಯನ್ನು ನಡೆಸಿಕೊಡುತ್ತಿದ್ದಾರೆ.

ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ ಕುಮಾರ ಹೆಗ್ಡೆಯವರ ಮಾರ್ಗದರ್ಶನದಲ್ಲಿ ಡಾ.ನಾಗರಾಜ ಪೂಜಾರಿ ತರಬೇತಿ ಕಾರ್ಯಾಗಾರನ್ನು ಸಂಘಟಿಸಿ ನಿರ್ವಹಣೆ ಮಾಡಿದರು.

Exit mobile version