ವಲಯ ಮಟ್ಟದ ಕಬಡ್ಡಿ ಪಂದ್ಯಾಟ-ಗೇರುಕಟ್ಟೆ ಫ್ರೌಡ ಶಾಲಾ ಬಾಲಕರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

0

ಗೇರುಕಟ್ಟೆ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಸಂಪನ್ಮೂಲ ಕೇಂದ್ರಗಳ ನೇತೃತ್ವದಲ್ಲಿ ಆ.31 ರಂದು ಸರಳಿಕಟ್ಟೆ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಗೇರುಕಟ್ಟೆ ಶಾಲಾ ಬಾಲಕರ ತಂಡ ಸರಕಾರಿ ಪ್ರೌಢಶಾಲೆ ಮಚ್ಚಿನ ತಂಡದ ಜೊತೆ ಸ್ಪರ್ಧಿಸಿ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಗೇರುಕಟ್ಟೆ ಫ್ರೌಡ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಅಜಿತ್ ಕುಮಾರ್ ಕೊಕ್ರಾಡಿ ತರಬೇತಿ ನೀಡಿದರು.ಈ ಸಂದರ್ಭದಲ್ಲಿ ಶಿಕ್ಷಕ ವೃಂದ ಸ್ಥಳೀಯ ಕ್ರೀಡಾಭಿಮಾನಿಗಳು ಪ್ರೋತ್ಸಾಹಿಸಿ ಸಹಕರಿಸಿದರು.

LEAVE A REPLY

Please enter your comment!
Please enter your name here