Site icon Suddi Belthangady

ವೇಣೂರು ಶ್ರೀ ಧ.ಮಂ.ಕೈಗಾರಿಕಾ ತರಬೇತಿ ಸಂಸ್ಥೆ- ಚಂದ್ರಕುಮಾರ್ ರವರಿಗೆ ಸೇವಾ ನಿವೃತ್ತಿ

ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿ ಸುದೀರ್ಘ 35 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಸೇವಾ ನಿವೃತ್ತಿ ಹೊಂದಿದ ಚಂದ್ರಕುಮಾರ್ ಹೆಚ್.ಪಿ ಇವರ ಬೀಳ್ಕೊಡುಗೆ ಸಮಾರಂಭ ಐಟಿಐಯಲ್ಲಿ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆ.ಆರ್ ರವರು ವಹಿಸಿ ನಿವೃತ್ತಿ ಹೊಂದುತ್ತಿರುವ ಚಂದ್ರಕುಮಾರ್ ರವರ ಕಾರ್ಯ ವೈಖರಿಯನ್ನು ಶ್ಲಾಘಿಸಿದರು.ಮುಖ್ಯ ಅತಿಥಿಗಳಾಗಿ ಸಂಸ್ಥೆಯ ನಿವೃತ್ತ ಪ್ರಾಚಾರ್ಯರಾದ ಸದಾನಂದ ಪೂಜಾರಿ ಯವರು ಮಾತನಾಡಿ ಚಂದ್ರಕುಮಾರ್ ರವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿನರಾಜ್ ಜೈನ್ ಶುಭ ಹಾರೈಸಿದರು.

ವೇದಿಕೆಯಲ್ಲಿ ತರಬೇತಿ ಅಧಿಕಾರಿಗಳಾದ ಪೀಟರ್ ಸಿಕ್ವೆರಾ ಹಾಗೂ ಕಚೇರಿ ಅಧೀಕ್ಷಕರಾದ ಉಮೇಶ್.ಕೆ ಉಪಸ್ಥಿತರಿದ್ದರು.ಸಂಸ್ಥೆಯ ವತಿಯಿಂದ ಚಂದ್ರಕುಮಾರ್ ದಂಪತಿಗಳಿಗೆ ಶಾಲು, ಫಲ ಪುಷ್ಪದೊಂದಿಗೆ ಬಂಗಾರದ ಉಂಗುರ ಹಾಗೂ ಸನ್ಮಾನ ಪತ್ರವನ್ನು ನೀಡಿ ಅಭಿನಂದಿಸಲಾಯಿತು.ಕಿರಿಯ ತರಬೇತಿ ಅಧಿಕಾರಿ ವಿನಯ ಚಂದ್ರರಾಜ್ ಸನ್ಮಾನ ಪತ್ರ ವಾಚಿಸಿದರು.ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು.ನಿವೃತ್ತ ಪ್ರಾಚಾರ್ಯರಾದ ಸದಾನಂದ ಪೂಜಾರಿ ಯವರು ಸ್ಮರಣಿಕೆಯೊಂದಿಗೆ ಗೌರವಿಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಚಂದ್ರಕುಮಾರ್ ರವರು ಸುಧೀರ್ಘವಾಗಿ 35 ವರ್ಷಗಳ ಕಾಲ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟ ಸಂಸ್ಥೆಯ ಅಧ್ಯಕ್ಷರಿಗೆ, ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗೆ ಮತ್ತು ಎಲ್ಲರಿಗೂ ಆಭಾರಿಯಾಗಿದ್ದೇನೆ ಎಂದರು.ಇದೇ ಸಂಧರ್ಭದಲ್ಲಿ ನಿವೃತ್ತರು ಸಂಸ್ಥೆಗೆ ಪ್ರೊಜೆಕ್ಟರ್ ನ್ನು ಕೊಡುಗೆಯಾಗಿ ನೀಡಿದರು.ಜ್ವಾಲಾ ಚಂದ್ರಕುಮಾರ್ ರವರು ಮಾತನಾಡಿ ಸಂಸ್ಥೆಯ ಹಾಗೂ ವಸತಿಗೃಹದ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಸಿಬ್ಬಂದಿಗಳ ಪರವಾಗಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳಾದ ದಯಾನಂದ ಭಂಡಾರಿ ಅಭಿನಂದನಾ ಭಾಷಣಗೈದು ಶ್ರೀಯುತರು ಸಂಸ್ಥೆಗೆ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು.ಕಿರಿಯ ತರಬೇತಿ ಅಧಿಕಾರಿಗಳಾದ ರತ್ನಾಕರ ರಾವ್ ರವರು ಯುತರ ಜೊತೆಗಿನ ಒಡನಾಟವನ್ನು ಸ್ಮರಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿವೃತ್ತರಾದ ಸನತ್ ಕುಮಾರ್ ಕೆ, ಸಂಸ್ಥೆಯ ಹಿತೈಷಿ ಜಗನ್ನಾಥ ದೇವಾಡಿಗ, ಕಿರಿಯ ತರಬೇತಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಂಪ್ಯೂಟರ್ ಶಿಕ್ಷಕಿ ಕುಮಾರಿ ಶ್ರದ್ಧಾ.ಎಂ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಶ್ರೀಧರ.ಡಿ ಸ್ವಾಗತಿಸಿದರು.ಪದ್ಮಪ್ರಸಾದ್ ಬಸ್ತಿ ಕಾರ್ಯಕ್ರಮ ನಿರೂಪಿಸಿ, ಸತೀಶ್ ಕೆ ಧನ್ಯವಾದ ಸಮರ್ಪಿಸಿದರು.

Exit mobile version