ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವ ಧಾರ್ಮಿಕ ಕಾರ್ಯಕ್ರಮ

0

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ 2 ನೇ ದಿನದ ಅಂಗವಾಗಿ ಭಕ್ತಿ ರಸಂಮಜರಿ ನಡೆಯಿತು.ಬಳಿಕ ಧಾರ್ಮಿಕ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ ವಹಿಸಿದ್ದರು.

ಪತ್ರಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮಸ್ಥಳ ಅವರನ್ನು ಸನ್ಮಾನಿಸಲಾಯಿತು.ವೇದಿಕೆಯಲ್ಲಿ ಸ್ವಾಮಿ ಪ್ರಸಾದ್ ಕನ್ಸ್ಟ್ರಕ್ಷನ್ ಮಾಲಕ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಾಗೇಶ್ ಕುಮಾರ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಗೌರವ ಸಲಹೆಗಾರ ಮಂಜುನಾಥ ರೈ ಬೆಳ್ತಂಗಡಿ, ಶ್ರೀ ರಾಘವೇಂದ್ರ ಸೇವಾ ಟ್ರಸ್ಟ್ ಕೋಶಾಧಿಕಾರಿ ವಸಂತ ಸುವರ್ಣ, ಉಪಾಧ್ಯಕ್ಷ ಮಹಾಬಲ ಶೆಟ್ಟಿ ಬೆಳ್ತಂಗಡಿ, ಶ್ರವಣ್ ರಾಜ್ ಹೇರಾಜೆ, ಪ್ರಧಾನ ಆರ್ಚಕ ರಾಘವೇಂದ್ರ ಭಾಂಗಿಣ್ಣಾಯ, ಸೋಮೆ ಗೌಡ ಉಪಸ್ಥಿತರಿದ್ದರು.
ಇತ್ತೀಚೆಗೆ ಹೃದಯಾಘಾತದಿಂದ ಮೃತಪಟ್ಟ ಸ್ಪಂದಾನ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here