ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 15ನೇ ವರ್ಧಂತಿ ಸೆ.3 ರಂದು ಗುರುದೇವ ಮಠದಲ್ಲಿ ವೈದಿಕ ವಿಧಿ ವಿಧಾನಗಳೊಂದಿಗೆ ಜರಗಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಮೀನುಗಾರಿಕೆ ಮತ್ತು ಒಳನಾಡು, ಬಂದರು ಸಚಿವ ಮಾಂಕಾಳ್ ಎಸ್. ವೈದ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಉಡುಪಿ ಕ್ಷೇತ್ರದ ಶಾಸಕರ ಯಶ್ ಪಾಲ್ ಸುವರ್ಣ, ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್, ಮಠದ ಹಿರಿಯ ಟ್ರಷ್ಟಿ ಚಿತ್ತಾರಂಜನ್ ಗರೋಡಿ, ಶ್ರೀ ರಾಮ ಕ್ಷೇತ್ರ ಸಮಿತಿ ಸಂಚಾಲಕ ಜಯಂತ ಕೋಟ್ಯಾನ್, ಬಿಲ್ಲವರ ಮಹಾ ಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್. ಪಿ. ಪೀತಾಂಬಾರ ಹೇರಾಜೆ, ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಪುಷ್ಪಾ ನಾಯ್ಕ್, ಟ್ರಷ್ಟಿ ತುಕಾರಾಮ್ ಸಾಲಿಯಾನ್, ಶ್ರೀ ರಾಮ ಕ್ಷೇತ್ರ ಸಮಿತಿಯ ಜಿಲ್ಲಾ ಸಂಚಾಲಕ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಹೊನ್ನಾವರ ಶ್ರೀರಾಮ ಕ್ಷೇತ್ರ ಸಮಿತಿ ಸಂಚಾಲಕ ವಾಮನ ನಾಯ್ಕ್, ಸಿದ್ಧಾಪುರ ಶ್ರೀ ರಾಮ ಕ್ಷೇತ್ರ ಸಮಿತಿ ಸಂಚಾಲಕ ಆರ್.ಎನ್.ನಾಯ್ಕ್, ಹೊನ್ನಾವರ ನಾಮಧಾರಿ ಸಂಘದ ಅಧ್ಯಕ್ಷ ಮಂಜುನಾಥ್ ನಾಯ್ಕ್, ವಿವಿಧ ಜನಪ್ರತಿನಿಧಿಗಳು, ಗಣ್ಯರು ಸ್ವಾಮೀಜಿಯವರ ಶಿಷ್ಯವೃಂದದವರು, ದ. ಕ., ಉಡುಪಿ, ಉತ್ತರ ಕನ್ನಡ, ಭಟ್ಕಳದ ಭಕ್ತರು ಹಾಜರಿದ್ದು ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.
ಉಪನ್ಯಾಸಕ ಕೇಶವ ಬಂಗೇರ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಸೀತಾರಾಮ ಬಿ.ಎಸ್ ನಿರೂಪಿಸಿದರು.ಕಾರ್ಯಕ್ರಮದ ಮೊದಲು ಬೆಳ್ತಂಗಡಿ ಸಾಯಿ ಭಜನಾ ತಂಡದಿಂದ ಭಜನೆ, ಮಹೇಶ್ ಶಾಂತಿಯವರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನ ನೆರವೇರಿಸಿದರು.