ಇಳಂತಿಲ: ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತನೆ- ಇಬ್ಬರು ಯುವಕರು ಪೊಲೀಸರ ವಶಕ್ಕೆ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಜಿನ ಇಳಂತಿಲ ಗ್ರಾಮದ ರಿಫಾಯಿ ನಗರ ಎಂಬಲ್ಲಿ ಇಬ್ಬರು ವ್ಯಕ್ತಿಗಳು ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬುಡೋಳಿ ಬಂಟ್ವಾಳ ನಿವಾಸಿ ಸಹ್ಯಾಝ್ ಅಹಮ್ಮದ್ (23) ಹಾಗೂ ಬಿಳಿಯೂರು ಗ್ರಾಮದ ಸಲೀಂ ಹುಸೈನ್ (40) ಬಂಧಿತರು.

ಆರೋಪಿಗಳು ಮಾದಕ ದ್ರವ್ಯ ಗಾಂಜಾ ಸೇವನೆ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದು, ಬಂಧಿತರಿಂದ ಮೊಬೈಲ್ ಪೋನ್ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here