ಬೆಂಗಳೂರು: ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ದ.ಕ, ಉಡುಪಿ ಜಿಲ್ಲೆಯ ಆರು ಬಿಜೆಪಿ ಶಾಸಕರು ಜೊತೆಗಿದ್ದರು. ಶಾಸಕರುಗಳಾದ ಹರೀಶ್ ಪೂಂಜ, ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ,ಗುರ್ಮೆ ಸುರೇಶ್ ಶೆಟ್ಟಿ, ಭಾಗಿರಥಿ ಮುರುಳ್ಯ ಭಾಗಿಯಾಗಿದ್ದರು.
ಈ ವೇಳೆ ಮುಖ್ಯಮಂತ್ರಿಗಳು ಮರುತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ ಎಂದು ತಿಳಿಸಿರುವುದಾಗಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಸುನಿಲ್ ಕುಮಾರ್ ಫೇಸ್ ಬುಕ್ ಬರಹದಲ್ಲೇನಿದೆ?ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.ನಮ್ಮ ಮನವಿಗೆ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನೀವುಗಳು ಬಂದಿರುವುದರಿಂದ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ನಮಗೆ ಭರವಸೆ ನೀಡಿದರು.