ಸೌತಡ್ಕ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಶ್ರೀ ಧನ್ವಂತರಿ ಕ್ಷೇತ್ರ ಕೊಕ್ಕಡಕ್ಕೆ 2ಲಕ್ಷ ರೂ ದೇಣಿಗೆ

0

ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಗಳೊಂದಿಗೆ ಜೀರ್ಣೋದ್ದಾರಗೊಳ್ಳುತ್ತಿರುವ ಸುಸಂಧರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ಇವರಿಂದ 2 ಲಕ್ಷ ರೂ. ಗಳ ದೇಣಿಗೆಯನ್ನು ಸೆ.4ರಂದು ಶ್ರೀ ಕ್ಷೇತ್ರದಲ್ಲಿ ಹಸ್ತಾಂತರಿಸಲಾಯಿತು.

ಈ ಸಂಧರ್ಭದಲ್ಲಿ ಆರ್.ಎಸ್.ಎಸ್. ಮುಖಂಡ ಕೃಷ್ಣ ಭಟ್, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಉಪಾಧ್ಯಕ್ಷ ಕುಶಾಲಪ್ಪ ಗೌಡ ಪುಡಿಕೆತ್ತೂರು, ದೇವಸ್ಥಾನದ ಅರ್ಚಕರು, ಟ್ರಸ್ಟ್ ನ ಸದಸ್ಯರು ಹಾಗೂ ಭಕ್ತಾದಿಗಳು ಮತ್ತು ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here