ತಾಲೂಕು ಮಟ್ಟದ ಫೂಟ್ ಬಾಲ್ ಪಂದ್ಯಾಟ–ಅನುಗ್ರಹಕ್ಕೆ ಸಮಗ್ರ ಪ್ರಶಸ್ತಿ

0

ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿಯ ವತಿಯಿಂದ ಅನುಗ್ರಹ ಶಾಲೆಯಲ್ಲಿ ನಡೆದ ೨೦೨೩-೨೪ ನೇ ಸಾಲಿನ ಫೂಟ್ ಬಾಲ್ ಪಂದ್ಯಾಟದಲ್ಲಿ ಅನುಗ್ರಹ ಶಾಲೆಯು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಪ್ರಥಮ, ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಪ್ರಥಮ, ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಪ್ರಥಮ ಹಾಗೂ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ವಿಜೇತ ಕ್ರೀಡಾಳುಗಳನ್ನು ಶಾಲಾ ಸಂಚಾಲಕರು, ಪ್ರಾಂಶುಪಾಲರು, ಶಿಕ್ಷಕರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here