ಕಳಿಯ: ಕಳಿಯ ಗ್ರಾಮ ಪಂಚಾಯತ್ 2022-23 ಸಾಲಿನ ವಾರ್ಷಿಕ ಜಮಾಬಂದಿ ಸೆ.5 ರಂದು ಕಳಿಯ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ನಡೆಯಿತು.
ಜಮಾಬಂದಿ ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ, ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿ ವಿಧ್ಯಾ ಪಿ.ಡಿ ನಡೆಸಿಕೊಟ್ಟರು.
ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಪಂಚಾಯತ್ ಉಪಾಧ್ಯಕ್ಷೆ ಇಂದಿರಾ ಬಿ.ಶೆಟ್ಟಿ, ಜಿಲ್ಲಾ ಪಂಚಾಯತ್ ವಿಭಾಗದ ಇಂಜಿನಿಯರ್ ಗಫೂರು, ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಚಾಯತ್ ಸದಸ್ಯರಾದ ಸುಭಾಷಿಣಿ ಜನಾರ್ದನ ಗೌಡ, ಮೋಹಿನಿ,ಮರೀಟ ಪಿಂಟೊ, ಪುಷ್ಪ ನಾಳ, ವಿಜಯ ಕುಮಾರ್ ಕೆ, ಹರೀಶ್ ಕುಮಾರ್ ಬಿ, ಪಂಚಾಯತು ಮಾಜಿ ಅಧ್ಯಕ್ಷ ಕೇಶವ ಪೂಜಾರಿ, ನಾಳ ದೇವಸ್ಥಾನ ವ್ಯವಸ್ಥಾನ ಸಮಿತಿ ಅಧ್ಯಕ್ಷ ಭುವನೇಶ್ ಜಿ, ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆಂರ್ಬುಡ, ನ್ಯಾಯತರ್ಪು ಅರಣ್ಯ ಸಮಿತಿ ಅಧ್ಯಕ್ಷ ವಸಂತ ಕುಮಾರ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ ಸ್ವಾಗತಿಸಿ, ಧನ್ಯವಾವಿತ್ತರು.