ನಗರದ ಪ್ರತಿಷ್ಠಿತ ಐಎಎಸ್ ತರಬೇತಿ ಸಂಸ್ಥೆ ಸರ್ವಜ್ಞ ಐಎಎಸ್ ಅಕಾಡೆಮಿಯು ಮುಂಬರುವ 2023-24ನೇ ಸಾಲಿನ ಐಎಎಸ್ ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ.ತರಬೇತಿಯಲ್ಲಿ ಇತಿಹಾಸ, ಅರ್ಥಶಾಸ್ತ್ರ, ರಾಜಕೀಯ ಶಾಸ್ತ್ರ, ಭೂಗೋಳಶಾಸ್ತ್ರ, ಗಣಿತ, ಮನೋ ಸಾಮರ್ಥ್ಯ, ಮೌಖಿಕ ಪರೀಕ್ಷೆಗಳು, ದೇಹದಾರ್ಡ್ಯ ತರಬೇತಿ, ಮುಖ್ಯ ಪರೀಕ್ಷೆ ಸಂದರ್ಶನ ಮುಂತಾದ ವಿಷಯಗಳನ್ನು ಒಳಗೊಂಡಿದೆ.ಒಂದು ವರ್ಷದ ತರಬೇತಿಯಿಂದ ಐಎಎಸ್, ಐಪಿಎಸ್, ಐಆರ್ ಎಸ್, ಕೆಎಎಸ್, ಪಿಡಿಒ, ಪಿಎಸ್‌ಐ, ಪೊಲೀಸ್, ಎಫ್‌ಡಿಎ, ಎಸ್‌ಡಿಎ, ತಾಂತ್ರಿಕೇತರ ಪರೀಕ್ಷೆಗಳು ಮುಂತಾದ ಹತ್ತರಿಂದ ಹನ್ನೆರಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಅವಕಾಶವಿದೆ.
ಪದವಿಧರಿಗೆ ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 10ರಿಂದ ಸಂಜೆ 4ರ ತನಕದ ಒಂದು ವರ್ಷದ ತರಬೇತಿ ಹಾಗೂ ಖಾಸಗಿ ಉದ್ಯೋಗ ಮಾಡುತ್ತಿರುವವರಿಗೆ ಅಥವಾ ವಿದ್ಯಾಭ್ಯಾಸ ಮಾಡುತ್ತಿರುವವರಿಗೆ ಆದಿತ್ಯವಾರ ಬೆಳಿಗ್ಗೆ 10ರಿಂದ ಸಂಜೆ 2 ಗಂಟೆವರೆಗಿನ ತರಬೇತಿ ವ್ಯವಸ್ಥೆ ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳಿಗೆ ಐಎಎಸ್ ಕೆಎಎಸ್ ತರಬೇತಿ
ಹೈಸ್ಕೂಲು ಪಿಯುಸಿ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವಾಗಲೇ ಐಎಎಸ್ ಕೆಎಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ವಿಶೇಷ ತರಬೇತಿ ಕಾರ್ಯಕ್ರಮವನ್ನು ವ್ಯವಸ್ಥೆ ಮಾಡಿದ್ದು ಶನಿವಾರ ಅಥವಾ ಆದಿತ್ಯವಾರದ ಬ್ಯಾಚುಗಳಲ್ಲಿ ತರಬೇತಿ ಪಡೆಯಬಹುದು.
ಕನಿಷ್ಠ ಒಂದು ವರ್ಷದ ತರಬೇತಿ ನೀಡಲಾಗುತ್ತಿದ್ದು ಗರಿಷ್ಠ ಸರಕಾರಿ ಉದ್ಯೋಗ ಸಿಗುವವರೆಗೆ ತರಬೇತಿ ಪಡೆಯುವ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರಾದ ಸುರೇಶ್ ಎಂ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಗರದ ಪಂಪ್ ವೆಲ್ ಬಳಿ ಬರುವ ಸತ್ಯಂ ಅರ್ಕೆಡ್ ನ ಮೂರನೇ ಮಹಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ವಜ್ಞ ಐಎಎಸ್ ಅಕಾಡೆಮಿಯ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ 9481033331 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.