ತಾಲೂಕು ಆಡಳಿತದಿಂದ ಶ್ರೀ ಕೃಷ್ಣಾಷ್ಟಮಿ ಆಚರಣೆ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ತಾಲೂಕು ಆಡಳಿತದ ವತಿಯಿಂದ ಮಿನಿವಿಧಾನ ಸೌಧದ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಶ್ರೀಕೃಷ್ಣ ದೇವರ ಫೋಟೋಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಸೀಲ್ದಾರ್ ಕೆ.ಸುರೇಶ್ ಕುಮಾರ್ ವಹಿಸಿದ್ದರು.ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕಿ ತಾರಾಕೇಸರಿ, ಕೊಕ್ಕಡ ವಿಭಾಗದ ಕಂದಾಯ ನಿರೀಕ್ಷಕ ಪವಾಡಪ್ಪ ದೊಡ್ಡಮನಿ ಹಬ್ಬದ ಬಗ್ಗೆ ಮಾತನಾಡಿದರು.

ವಿವಿಧ ಇಲಾಖೆಯ ಅಧಿಕಾರಿಗಳು, ತಾಲೂಕು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.ತಾಲೂಕು ಪಂಚಾಯತ್ ಸಂಯೋಜಕ ಜಯಾನಂದ ಲಾಯಿಲ ಸ್ವಾಗತಿಸಿದರು.

LEAVE A REPLY

Please enter your comment!
Please enter your name here