ಬೆಳ್ತಂಗಡಿ: ಭಾರತದ ಅತಿ ದೊಡ್ಡ ತೆಂಗು ರೈತರ ಸಂಸ್ಥೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ವತಿಯಿಂದ ಬೆಳ್ತಂಗಡಿಯ ಸಂತೆಕಟ್ಟೆ ಚರ್ಚ್ ರಸ್ತೆ ಬಳಿಯ ಸಿ.ವಿ.ಸಿ. ಸಭಾಂಗಣದಲ್ಲಿ
ಸೆ. 11ರಂದು ಬೆಳಿಗ್ಗೆ 10ರಿಂದ ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕ ಸಂಸ್ಥೆಯ ಶೇರು ಪ್ರಮಾಣ ಪತ್ರ ವಿತರಣೆ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೃಷಿಕ ಪ್ರಭಾಕರ್ ಮಯ್ಯ ಸುರಿಯ ಭಾಗವಹಿಸಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಕಾಸರಗೋಡಿನ ಐ.ಸಿ.ಎ.ಆರ್-ಸಿ.ಪಿ.ಸಿ.ಆರ್.ಐ ಯ ಹಿರಿಯ ವಿಜ್ಞಾನಿ ಡಾ.ರಾಜಕುಮಾರ್ ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಚಂದ್ರಶೇಖರ್ ಕೆ. ಎಸ್. ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷ ಕುಸುಮಾಧರ್ ಎಸ್.ಕೆ. ತಿಳಿಸಿದ್ದಾರೆ.