ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ವತಿಯಿಂದ ಮಂಗಳೂರಿನ ಕೊರ್ಡೆಲ್ ಹಾಲ್ ನಲ್ಲಿ 2022-23ನೇ ಸಾಲಿನ 37ನೇ ವಾರ್ಷಿಕ ಸಭೆ ನಡೆಯಿತು.
ಕಾರ್ಯಕ್ರಮದಲ್ಲಿ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿಯು ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನೀಡಲಾಯಿತು. ಪ್ರಶಸ್ತ್ರಿಯನ್ನು ಸಂಘದ ಅಧ್ಯಕ್ಷರಾದ ಮಮತಾ ಕೆ ಮತ್ತು ಕಾರ್ಯನಿರ್ವಹಣಾಧಿಕಾರಿ ಭವ್ಯ ಕೆ.ಎಸ್ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರಿನ ಅಧ್ಯಕ್ಷರಾದ ಕೆ.ಪಿ ಸುಚರಿತ ಶೆಟ್ಟಿ, ಉಪಾಧ್ಯಕ್ಷರಾದ ಎಸ್.ಬಿ.ಜಯರಾಮ ರೈ, ಆಡಳಿತ ಮಂಡಳಿ ನಿರ್ದೇಶಕರು, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
p>