ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ.ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಅಧ್ಯಕ್ಷತೆ ವಹಿಸಿ, ಶಿಕ್ಷಕರ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ನಂತರ ಶಾಲೆಯ ಎಲ್ಲ ಶಿಕ್ಷಕ ವೃಂದದವರಿಗೆ ಮನರಂಜನೆಯ ಆಟಗಳನ್ನು ಹಮ್ಮಿಕೊಳ್ಳಲಾಗಿತ್ತು.ಶಿಕ್ಷಕರೆಲ್ಲರೂ ಕೂಡ ಈ ಒಂದು ಮನೋರಂಜನೆಯಿಂದ ಕೂಡಿದ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟರು.

LEAVE A REPLY

Please enter your comment!
Please enter your name here