ಉಜಿರೆ: ಉಜಿರೆ ಗ್ರಾಮ ಪಂಚಾಯತ್ ನ 20 ಅಂಶಗಳು ಸೇರಿದಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಸೆ.7 ರಂದು ಉಜಿರೆ ಗ್ರಾಮ ಪಂಚಾಯತು ಅಮೃತ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ ರವರ ಅಧ್ಯಕ್ಷತೆಯಲ್ಲಿ ಜರಗಿತು.
ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್ ಸದಸ್ಯರು, ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಇಜಿಐ ಸಂಸ್ಥೆಯ ಅಧಿಕಾರಿಗಳು ಹಾಜರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ ಹೆಚ್.ಪ್ರಕಾಶ್ ಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು.ಕಾರ್ಯದರ್ಶಿ ಶ್ರವಣ್ ಕುಮಾರ್ ಸ್ವಾಗತಿಸಿದರು.