

ಕನ್ಯಾಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕ ಒಕ್ಕೂಟ ಮಂಗಳೂರು ವತಿಯಿಂದ ಮಂಗಳೂರಿನ ಕೊರ್ಡೆಲ್ ಹಾಲ್‌ನಲ್ಲಿ 2022-23ನೇ ಸಾಲಿನ ವಾರ್ಷಿಕ ಸಭೆ ನಡೆಯಿತು.
ಕಾರ್ಯಕ್ರಮದಲ್ಲಿ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿಯು ಕನ್ಯಾಡಿ (ಜಯನಗರ ) ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನೀಡಲಾಯಿತು.
ಪ್ರಶಸ್ತಿಯನ್ನು ಸಂಘದ ಅಧ್ಯಕ್ಷೆ ಸೌಮ್ಯಲತಾ ಜಯಂತ್ ಗೌಡ ಮತ್ತು ಕಾರ್ಯನಿರ್ವಹಣಾಧಿಕಾರಿ ರೇವತಿ ಬಿ.ಸ್ವೀಕರಿಸಿದರು.
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ.ಮಂಗಳೂರಿನ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ, ಉಪಾಧ್ಯಕ್ಷ ಎಸ್.ಬಿ.ಜಯರಾಮ ರೈ, ಆಡಳಿತ ಮಂಡಳಿ ನಿರ್ದೇಶಕರು, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.