ಅಳದಂಗಡಿ: ಸೈಂಟ್ ಪೀಟರ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಅಳದಂಗಡಿಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ಮುಖ್ಯ ಅತಿಥಿಗಳಾಗಿ ಶಾಲಾ ಸಂಚಾಲಕ ವಂದನೀಯ ಫಾ.ಎಲಿಯಾಸ್ ಡಿಸೋಜ ಅವರು ಭಾಗವಹಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಶೀಬಾ ಜೋಸೆಫ್ ಉಪಸ್ಥಿತರಿದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಶಿಕ್ಷಕರಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

10ನೇ ತರಗತಿ ವಿದ್ಯಾರ್ಥಿಗಳಾದ ಕು.ಭಕ್ತಿ ಶೆಟ್ಟಿ ಹಾಗೂ ಅಖಿಲೇಶ್ ಶರ್ಮಾ ಕಾರ್ಯಕ್ರಮ ನಿರ್ವಹಿಸಿ, ಕು.ಲಿಯೋನ ಮೋನಿಸ್ ಸ್ವಾಗತಿಸಿ, ಸಾತ್ವಿಕ್ ಜೋಷಿ ವಂದಿಸಿದರು.

ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here