ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದಿವ್ಯಜೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

0

ಕಾಯರ್ತಡ್ಕ: ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾದ ಆಡ್ಲಿನ್ ಎಲಿಜಬೆತ್ ಜೆರಿನ್ ರವರು ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆ ದೇರಳಕಟ್ಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 68 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಆಡ್ಲಿನ್ ರವರು ಸಾಮೆದಕಲಪು ಜೆರಿನ್ ಥೋಮಸ್ ಮತ್ತು ಝಾನ್ಸಿ ಜೆರಿನ್ ದಂಪತಿಯ ಪುತ್ರಿಯಾಗಿದ್ದು ಓದಿನಲ್ಲೂ ಮುಂದಿದ್ದು ಶಾಲೆಯಿಲ್ಲಿ ಉತ್ತಮ ವಿದ್ಯಾರ್ಥಿನಿಯಾಗಿ ಶಾಲೆಗೆ ನೆಚ್ಚಿನ ವಿದ್ಯಾರ್ಥಿನಿಯಾಗಿ ಮತ್ತು ಪೋಷಕರಿಗೆ ನೆಚ್ಚಿನ ಮಗಳಾಗಿ ಉತ್ತಮ ಸಾಧನೆ ಮಾಡಿರುತ್ತಾರೆ.

LEAVE A REPLY

Please enter your comment!
Please enter your name here