ಬೆಳಾಲು : ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಗೋದಾಮು ಕಟ್ಟಡದ ಉದ್ಘಾಟನೆ ಸೆ.10 ರಂದು ನಡೆಯಿತು. ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲದ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು.
ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೆಚ್. ಪದ್ಮ ಗೌಡ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ ಜಿ. ಭಿಡೆ, ದ. ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರು ತ್ರೀವೇಣಿ ರಾವ್ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಮುಖ್ಯ ಕಾರ್ಯನಿರ್ವಾಣಾಧಿಕಾರಿ ನಾರಾಯಣ ಗೌಡ, ಉಪಾಧ್ಯಕ್ಷ ಸುರೇಂದ್ರ ಗೌಡ, ನಿರ್ದೇಶಕರುಗಳಾದ ದಿನೇಶ್ ಎ., ವಿಜಯ ಗೌಡ ಎಸ್., ದಾಮೋದರ ಗೌಡ ಸುರುಳಿ, ರಾಜಪ್ಪ ಗೌಡ, ಸುಲೈಮಾನ್ ಬಿ., ರಮೇಶ್ ಗೌಡ ಎ., ಎಲ್ಯಣ್ಣ ನಾಯ್ಕ, ಮಾಣಿಗ, ಸೀತಮ್ಮ, ಕೆ. ಎಂ., ಸುಜಾತಾ, ಉಪಸ್ಥಿತರಿದ್ದರು.ಸಿಬ್ಬಂದಿಗಳು ಸಹಕರಿಸಿದರು.
ಸಂಘದ ಸದಸ್ಯರು, ಗ್ರಾಹಕರು ಹಾಜರಿದ್ದರು. ಬೆಳಾಲು ಶ್ರೀ ಧ. ಮ.ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ನೂತನ ನವೋದಯ ಸ್ವ ಸಹಾಯ ಸಂಘಗಳ ಉದ್ಘಾಟನೆ, ರೈತರ ಕ್ಷೇಮನಿಧಿಯಿಂದ ಪರಿಹಾರ ವಿತರಣೆ, ದ. ಕ. ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್.ರಾಜೇಂದ್ರ ಕುಮಾರ್, ಶಾಸಕ ಹರೀಶ್ ಪೂಂಜ,2023ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಾಮಕೃಷ್ಣ ಭಟ್ ಚೊಕ್ಕಡಿ ಇವರನ್ನು ಸನ್ಮಾನಿಸಲಾಯಿತು.