Site icon Suddi Belthangady

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ 39 ನೇ ವರ್ಷದ ವಾರ್ಷಿಕ ಮಹಾಸಭೆ

ತಣ್ಣೀರಪಂತ: ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.)ಇದರ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸೆ.10 ರಂದು ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡದ ಸಭಾಂಗಣದಲ್ಲಿ ಜರುಗಿತು.

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ನಿರಂಜನ ಬಾವಂತಬೆಟ್ಟು ಸಭಾಧ್ಯಕ್ಷತೆ ವಹಿಸಿದರು.

ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಜ್ ರವರು ಸಭೆಯಲ್ಲಿ ಲೆಕ್ಕಪತ್ರ ವಾಚಿಸಿದರು.

2022-23 ರಲ್ಲಿ ಒಟ್ಟು 357541759.06 ವ್ಯವಹಾರ ನಡೆಸಿ,3975705.09 ನಿವ್ವಳ ಲಾಭ ಗಳಿಸಿರುತ್ತದೆ.

ನಿವೃತ್ತಿಯ ಜೀವನ ನಡೆಸುವವರನ್ನು ಹಾಗೂ ಹತ್ತನೇ ತರಗತಿಯಿಂದ ಸ್ನಾತಕೋತ್ತರ ಪದವಿ ವರೆಗಿನ ವಿದ್ಯಾಭ್ಯಾಸದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಪಡೆದ ಹಾಲು ಉತ್ಪಾದಕರ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಯಿತು.

ಬೆಳ್ತಂಗಡಿ ದ.ಕ.ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ರಾಜೇಶ್ ಪಿ.ಕಾಮಾತ್ ಹೈನುಗಾರಿಕೆಯಲ್ಲಿ ಹೆಚ್ಚಿನ ಲಾಭ ಪಡೆಯುವ ಬಗ್ಗೆ ಮಾಹಿತಿ ನೀಡಿದರು. ಸಂಘದ ನಿರ್ದೇಶಕರು ಹಾಗೂ ಸಂಘದ ಸದಸ್ಯರು ಭಾಗವಹಿಸಿದರು.

Exit mobile version