Site icon Suddi Belthangady

ಹಿರಿಯ ಪ್ರಾಥಮಿಕ ವಿಭಾಗದ ಬಾಲಕರ ತಾಲೂಕು ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಉರುವಾಲು ಶ್ರೀ ಭಾರತೀ ಆಂ.ಮಾ.ಪ್ರೌಢ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಉರುವಾಲು: ಉರುವಾಲು ಶ್ರೀ ಭಾರತೀ ಆಂ.ಮಾ.ಪ್ರೌಢ ಶಾಲೆಯ ವಿದ್ಯಾರ್ಥಿಗಳು ಕರಾಯ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾಟ ದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕಬ್ಬಡ್ಡಿ ಪಂದ್ಯಾಟಕ್ಕೆ ಆಯ್ಕೆಗೊಂಡು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಡಗಕಾರಂದೂರುನಲ್ಲಿ ನಡೆದ ತಾಲೂಕು ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಭಾಗವಹಿಸಿದ ವಿದ್ಯಾರ್ಥಿಗಳು: 7ನೇ ತರಗತಿಯ ನಿಶಾಂತ್, ನಂದನ್, ಜ್ಞಾನೇಶ್ , ಪ್ರಸನ್ನ, ಪ್ರಮಿತ್, ಅರ್ಪಿತ್, ಪ್ರಣಿತ್, ವೈಶಾಕ್, ರಮಿತ್, 6 ನೇ ತರಗತಿಯ ಯಜ್ನೇಶ್ ಹಾಗೂ ಕಾರ್ತಿಕ್.
ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ಶೋಭಿತ ಕೆ ಆರ್, ಶಿಕ್ಷಕ ವೃಂದ ಹಾಗೂ ಸೇವಾ ಸಮಿತಿಯ ಸರ್ವ ಸದಸ್ಯರು ಸಹಕರಿಸಿದರು.

Exit mobile version