ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ತಾಲೂಕು ಪಂಚಾಯತ್ ಆವರಣ ಬೆಳ್ತಂಗಡಿಯಲ್ಲಿ ಸೆ.11 ರಂದು ನಡೆಯಿತು.ಸಭಾಂಗಣ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್, ಉದ್ಘಾಟಿಸಿದರು.ಶಾಸಕರ ಹರೀಶ್ ಪೂಂಜ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಮಂಜುನಾಥ ಭಂಡಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ., ಕಾರ್ಯನಿರ್ವಾಹಕ ಅಭಿಯಂತರರು ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗ, ಮಂಗಳೂರಿನ ಆರ್.ವೇಣುಗೋಪಾಲ್, ಪುತ್ತೂರು ಸಹಾಯಕ ವಿಭಾಗ ಅಧಿಕಾರಿ ಗೀರಿಶ್ ನಂದನ್, ತಹಶೀಲ್ದಾರ್ ಸುರೇಶ್ ಕುಮಾರ್ ಟಿ, ಬೆಳ್ತಂಗಡಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ನಿತೀನ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಾಜಿ ಶಾಸಕ ಕೆ ವಸಂತ ಬಂಗೇರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಜಿ.ಪಂ.ಸದಸ್ಯರು,ತಾ.ಪಂ.ಮಾಜಿ ಸದಸ್ಯರುಗಳು, ಗ್ರಾ.ಪಂ.ಸದಸ್ಯರು, ತಾ.ಪಂ.ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾ.ಪಂ.ಪಿಡಿಓಗಳು ಹಾಜರಿದ್ದರು.ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಸ್ವಾಗತಿಸಿದರು.