Site icon Suddi Belthangady

ಕುತ್ಲೂರು ಸ.ಉ.ಪ್ರಾ.ಶಾಲೆಯಲ್ಲಿ ಸಮವಸ್ತ್ರ ವಿತರಣೆ- ಸಮವಸ್ತ್ರ ಮಕ್ಕಳಲ್ಲಿ ಶಿಸ್ತು ಮತ್ತು ಸಮಾನತೆಯ ಭಾವವನ್ನು ಬೆಳೆಸುತ್ತದೆ: ರಾಮಚಂದ್ರ ಭಟ್

ಕುತ್ಲೂರು: ಮಕ್ಕಳು ಚಿಕ್ಕಂದಿನಲ್ಲಿ ತಮ್ಮ ಉಡುಪಿನ ಬಗ್ಗೆ ಜಾಗ್ರತೆ ಮತ್ತು ಕಾಳಜಿಯನ್ನು ವಹಿಸುವ ಗುಣವನ್ನು ಬೆಳೆಸಿಕೊಳ್ಳಬೇಕು.ಇದು ಅವರಲ್ಲಿ ಶಿಸ್ತು ಮತ್ತು ಸಮಾನತೆಯ ಭಾವವನ್ನು ಬೆಳೆಸುತ್ತದೆ.ಅದಕ್ಕಾಗಿಯೇ ಬಿಳಿ ಮತ್ತು ನೀಲಿ ಬಣ್ಣದ ಸಮವಸ್ತ್ರವನ್ನು ನೀಡಿರುವುದು.ಒದಗಿಸಿದ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು, ಒಳ್ಳೆಯ ಅಂಕಗಳನ್ನು ಪಡೆದುಕೊಂಡು, ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬೇಕು.ಆ ಮೂಲಕ ಶಾಲೆಗೆ ಕೃತಜ್ಞರಾಗಿದ್ದುಕೊಂಡು ಸಂಸ್ಥೆಯ ಉನ್ನತಿಗೆ ಸಹಕರಿಸಿ ಹಾಗೂ ಪ್ರತಿವರ್ಷ ಶಾಲೆಯ ಅಭಿವೃದ್ಧಿಗೆ ಪೂರಕವಾಗಿರುವ ಬಹಳಷ್ಟು ಕೊಡುಗೆಗಳನ್ನು ಕೊಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಮತ್ತು ಸದಸ್ಯರನ್ನು ಸದಾ ಸ್ಮರಿಸುತ್ತೇವೆ ಎಂದು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ರಾಮಚಂದ್ರ ಭಟ್ ನುಡಿದರು.

ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುತ್ಲೂರು ಇಲ್ಲಿ MCF ಸಂಸ್ಥೆ ಕೊಡ ಮಾಡಿದ 103 ವಿದ್ಯಾರ್ಥಿಗಳ ಸಮವಸ್ತ್ರವನ್ನು ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜವರ್ಮ ಜೈನ್ ರವರು ವಿತರಿಸಿದರು.ನಿಕಟ ಪೂರ್ವ ಗ್ರಾಮ್ ಪಂಚಾಯತ್ ಅಧ್ಯಕ್ಷರಾದ ಆಶಾಲತಾ ಮತ್ತು ಸ್ಥಳೀಯ ಪಂಚಾಯತ್ ಸದಸ್ಯರಾದ ಸಂತೋಷ್ ಮರ್ದೊಟ್ಟು ವೇದಿಕೆಯಲ್ಲಿದ್ದರು.

ಶಾಲಾ ಮುಖ್ಯೋಪಾಧ್ಯಾಯನಿ ರೂಪ ಕುಮಾರಿಯವರು ಸ್ವಾಗತಿಸಿದ ಈ ಕಾರ್ಯಕ್ರಮವನ್ನು ಸಹ ಶಿಕ್ಷಕಿ ಆಶಾ ರವರು ನಿರೂಪಿಸಿದರು.ಗೌರವ ಶಿಕ್ಷಕಿಯಾದ ಮಾಲತಿ ವಂದಿಸಿದರು.

Exit mobile version