ನೈರ್ಮಲ್ಯ ಘಟಕಾಂಶಗಳು, ಓಡಿಎಫ್ ಪ್ಲಸ್ ಸುಸ್ಥಿರತೆ ಅನುಷ್ಠಾನಕ್ಕಾಗಿ ಕಾಶಿಪಟ್ಣ ಗ್ರಾಮ ಪಂಚಾಯತ್‌ಗೆ ಪ್ರಶಸ್ತಿ ಪ್ರದಾನ

0

ಕಾಶಿಪಟ್ಣ: ನೈರ್ಮಲ್ಯ ಘಟಕಾಂಶಗಳು ಹಾಗೂ ಓಡಿಎಫ್ ಪ್ಲಸ್ ಸುಸ್ಥಿರತೆ ಅನುಷ್ಠಾನಕ್ಕಾಗಿ ಕಾಶಿಪಟ್ಣ ಗ್ರಾಮ ಪಂಚಾಯತ್‌ಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ ಮೂಲಕ ಗ್ರಾಮ ಪಂಚಾಯತ್‌ಗಳಲ್ಲಿ ಅನುಷ್ಠಾನ ಮಾಡಿರುವ ನೈರ್ಮಲ್ಯ ಘಟಕಾಂಶಗಳು ಹಾಗೂ ಓಡಿಎಫ್ ಪ್ಲಸ್ ಸುಸ್ಥಿರತೆಗೊಳಿಸಲು ಹಮ್ಮಿಕೊಂಡಿರುವ ಚಟುವಟಿಕೆ ಕುರಿತು ಸಮೀಕ್ಷೆ ನಡೆಸಿದ್ದರು. ಈ ಸಮೀಕ್ಷೆ ಪ್ರಕಾರ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಗ್ರಾಮ ಪಂಚಾಯತ್‌ಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.ಈ ಪೈಕಿ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮ ಪಂಚಾಯತ್‌ಗೆ ಸೆ.11ರಂದು ಮಂಗಳೂರಿನಲ್ಲಿರುವ ದ.ಕ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ. ಬಂಗೇರ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಆಶಾಲತಾ ಎಚ್. ಪ್ರಶಸ್ತಿ ಸ್ವೀಕರಿಸಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ನಿರ್ದೇಶಕ ನಾಗೇಂದ್ರ ಪ್ರಸಾದ್ ಪ್ರಶಸ್ತಿ ಪ್ರದಾನ ಮಾಡಿದರು.

p>

LEAVE A REPLY

Please enter your comment!
Please enter your name here