ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕ-ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ

0

ವೇಣೂರು: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಭಿಷೇಕ ಮಹೋತ್ಸವ 2024 ಇದರ ಪೂರ್ವಭಾವಿಯಾಗಿ ದ. ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರ ಅಧ್ಯಕ್ಷತೆಯಲ್ಲಿ ಜನ ಪ್ರತಿನಿಧಿಗಳ ಮತ್ತು ಇಲಾಖಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ಸೆ.11 ರಂದು ವೇಣೂರು ಶ್ರೀ ಬಾಹುಬಲಿ ಸಭಾ ಭವನದಲ್ಲಿ ನಡೆಯಿತು.

ಮೂಡಬಿದ್ರೆ ಜೈನ್ ಬಸದಿಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ,ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿ ,ಮಸ್ತಕಾಭಿಷೇಕ ಸಮಿತಿಯ ಕಾರ್ಯಧ್ಯಕ್ಷ ಅಳದಂಗಡಿ ಅರಮನೆಯ ಅರಸರಾದ ಡಾ. ಪದ್ಮ ಪ್ರಸಾದ್ ಅಜಿಲರು,ಉಪಾಧ್ಯಕ್ಷ ಮಾಜಿ ಸಚಿವ ಅಭಯಚಂದ್ರ ಜೈನ್,ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಪುತ್ತೂರು ಸಹಾಯಕ ಕಮಿಷನರ್ ಗಿರೀಶ್ ನಂದನ್ ಪೊಲೀಸ್ ಅಧಿಕಾರಿಗಳು,ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಉಪಸ್ಥಿತರಿದ್ದರು.

ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ದಿಗಂಬರ ಜೈನ್ ತೀರ್ಥ ಕ್ಷೇತ್ರ ಸಮಿತಿಯ ಮತ್ತು ಮಸ್ತಕಾಭಿಷೇಕ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು ತಹಸೀಲ್ದಾರ್ ಸುರೇಶ್ ಕುಮಾರ್ ಸ್ವಾಗತಿಸಿದರು.

LEAVE A REPLY

Please enter your comment!
Please enter your name here