ಕುಕ್ಕೇಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಸೆ.11 ರಂದು ನಡೆದ ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ ) ಯೋಜನೆಯಡಿ ವಿವಿಧ ಘಟಕಾಂಶಗಳನ್ನು ಉತ್ತಮವಾಗಿ ಅನುಷ್ಠಾನ ಮಾಡಿರುವ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಪಂಚಾಯಿತಿಗೆ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2023 ನೇ ಸಾಲಿನಲ್ಲಿ ನಡೆದ ತಾಲೂಕು ಮಟ್ಟದ ಸಮೀಕ್ಷೆಯಲ್ಲಿ ದ್ವಿತೀಯ ಸ್ಥಾನ ಪಡೆಯಿತು.
ಕುಕ್ಕೇಡಿ ಪಂಚಾಯಿತಿ ಅಧ್ಯಕ್ಷೆ ಅನಿತಾ.ಕೆ ಮತ್ತು ಪಿ.ಡಿ.ಓ ನವೀನ್.ಎ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಿದರು.