ಪೆರ್ಲ: ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಇದರ ಆಶ್ರಯದಲ್ಲಿ 38ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ ಮೊಸರು ಕುಡಿಕೆ ಉತ್ಸವವು ಸೆ.10ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರ್ಲ ಮೈದಾನದಲ್ಲಿ ನಡೆಯಿತು.
ಪುರುಷರಿಗೆ ಮಹಿಳೆಯರಿಗೆ ಮತ್ತು ಮಕ್ಕಳಿಗೆ ವಿಶೇಷ ಆಟೋ ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ತೀರ್ಪುಗಾರರಾಗಿ ಸದಾಶಿವ ಸಕಲೇಶಪುರ ದೈಹಿಕ ಶಿಕ್ಷಣ ನಿರ್ದೇಶಕರು ಮತ್ತು ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಕಿಯಾದ ಅಶ್ವಿತಾ ಯುಎಸ್ ನೆರವೇರಿಸಿದರು.
ತದನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ವಿನಯಚಂದ್ರ.ಟಿ ಅಧ್ಯಕ್ಷ ಸ್ಥಾನ ಅಲಂಕರಿಸಿದರು.
ವೇದಿಕೆಯಲ್ಲಿ ಉಪಾಧ್ಯಕ್ಷರಾದ ಧನಂಜಯ ಶೆಟ್ಟಿಗಾರ್, ಕಾರ್ಯದರ್ಶಿಯಾದ ಕಿರಣ್ ಕುಮಾರ್, ಗೌರವಾಧ್ಯಕ್ಷರಾದ ತ್ಯಾಂಪಣ್ಣ ಶೆಟ್ಟಿಗಾರ್ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಈ ವಿಶೇಷ ಕಾರ್ಯಕ್ರಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿವೃತ್ತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾದ ತ್ಯಾಂಪಣ್ಣ ಶೆಟ್ಟಿಗಾರ್ ದಂಪತಿಗಳಿಗೆ ಸನ್ಮಾನಿಸಲಾಯಿತು.ಸ್ವಾಗತವನ್ನು ಧನಂಜಯ ಕುಮಾರ್ ಖಂಡಿಗ ಮತ್ತು ವಂದನಾರ್ಪಣೆಯನ್ನು ಮಹೇಶ್ ಶೆಟ್ಟಿಗಾರ್ ನೆರವೇರಿಸಿದರು.