ಬೆಳ್ತಂಗಡಿ: ಕಳೆದ 11 ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ನಡೆದ ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯರವರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸೆ.12 ಮತ್ತು 13ರಂದು ಮಂಗಳೂರಿನ ಕ್ಲಾಕ್ ಟವರ್ ಹತ್ತಿರದ ತಾಲೂಕು ಕಚೇರಿ ಎದುರು ನಡೆಯಲಿರುವ ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹಕ್ಕೆ ಸೆ.12ರಂದು ಬೆಳಿಗ್ಗೆ ಚಾಲನೆ ನೀಡಲಾಯಿತು.
ಸೌಜನ್ಯ ಪ್ರಕರಣದ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುವ ಈ ಧರಣಿಯಲ್ಲಿ ಬೆಳ್ತಂಗಡಿ ತಾಲೂಕಿನ ಹಲವರು ಭಾಗವಹಿಸಿದ್ದಾರೆ.
ಸೌಜನ್ಯ ಅತ್ಯಾಚಾರ ಮತ್ತು ಕೊಲೆಯ ಆರೋಪಿಗಳನ್ನು ಪತ್ತೆ ಹಚ್ಚಬೇಕು, ತನಿಖಾಧಿಕಾರಿ ಮತ್ತು ವೈದ್ಯಾಧಿಕಾರಿಯನ್ನು ತನಿಖೆಗೊಳಪಡಿಸಿ ತಪ್ಪಿತಸ್ಥರನ್ನು ಕಾನೂನು ಪ್ರಕಾರ ಶಿಕ್ಷಿಸಬೇಕು ಎಂದು ಒತ್ತಾಯಿಸಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ.
p>