Site icon Suddi Belthangady

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಗೌರಾವಾರ್ಪಣೆ

ವೇಣೂರು: ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೆ.11 ರಂದು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಪುರುಷೋತ್ತಮ್ ರಾವ್ ಸಚಿವರಿಗೆ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಬಂಗೇರ ಕಾಶಿಪಟ್ನ, ಜಿ.ಪ.ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಮಾಜಿ ಸದಸ್ಯ ಶೇಖರ್ ಕುಕ್ಕೇಡಿ, ಪ್ರಮುಖರಾದ ಪ್ರಭಾಕರ್ ಹೆಟ್ಟಾಜೆ, ಬಾಲಕೃಷ್ಣ ಭಟ್ ಕಾಮೆಟ್ಟು, ಸತೀಶ್ ಹೆಗ್ಡೆ, ದೇಜಪ್ಪ ಶೆಟ್ಟಿ, ಅರವಿಂದ ಶೆಟ್ಟಿ, ಶಶಿಧರ್ ಶೆಟ್ಟಿ, ರಮೇಶ್ ಪೂಜಾರಿ ಪಡ್ಡಾಯಿ ಮಜಲು, ಹರೀಶ್ ಪೊಕ್ಕಿ, ಸತೀಶ್ ಕಜಪಟ್ಟ, ಅಶೋಕ್ ಪಾನೂರು, ಜಗದೀಶ್ ಭಟ್ ಮೊದಲಾದವರು ಉಪಸ್ಥಿತರಿದ್ದರು.

Exit mobile version