Site icon Suddi Belthangady

ಯೋಗಾಸನ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಯೋಗಾಸನ ಸ್ಪರ್ಧೆಯು ಸೆ.11ರಂದು ಶ್ರೀ ರಾಮ ಪದವಿ ಪೂರ್ವ ಕಾಲೇಜು ಹನುಮಾನ್ ನಗರ ಕಲ್ಲಡ್ಕದಲ್ಲಿ ನಡೆಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ 5 ವಿದ್ಯಾರ್ಥಿಗಳು ಭಾಗವಹಿಸಿ, ವಯೋಮಾನ -19 ರ ಬಾಲಕಿಯರ ವಿಭಾಗದಲ್ಲಿ ಚಾಂಪಿಯನ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಕು.ಶರಣ್ಯ, ವಿಜಯಲಕ್ಷ್ಮಿ, ಯುವಶ್ರೀ ಜೈನ್, ಹರ್ಷಿತಾ , ಪೃಥ್ವಿ ಭಾಗವಹಿಸಿರುತ್ತಾರೆ.ಪೃಥ್ವಿ ದ್ವಿತೀಯ ಸ್ಥಾನ ಗಳಿಸಿ ಹಾಗೂ ಹರ್ಷಿತ ಐದನೇ ಸ್ಥಾನವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಇವರಿಗೆ ಸಂದೇಶ್ ಪೂಂಜ ತರಬೇತಿಯನ್ನು ನೀಡಿರುತ್ತಾರೆ.

ಇವರಿಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಕ್ರೀಡಾ ಸಂಘದ ಕಾರ್ಯದರ್ಶಿಯವರು ಸಹಕರಿಸಿರುತ್ತಾರೆ.

Exit mobile version