ಉಜಿರೆ ಎಸ್.‌ಡಿ.ಎಂ ಕಾಲೇಜಿನ ಸಸ್ಯಶಾಸ್ತ್ರದ ವಿಭಾಗದ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆಯ ಸಸ್ಯಶಾಸ್ತ್ರ ವಿಭಾಗದ ಸಕ್ರಿಯ ಸಂಘಗಳಾದ ‘ಸಸ್ಯಸೌರಭ’ ಮತ್ತು ‘ಇಕೋ ಕ್ಲಬ್‌’ನ ಪ್ರಸ್ತುತ ಶೈಕ್ಷಣಿಕ ವರ್ಷದ ಕಾರ್ಯಚಟುವಟಿಕೆಗಳ ಉದ್ಘಾಟನೆಯು ಸೆ.9ರಂದು ‘ಸಮ್ಯಗ್ಧರ್ಶನ’ ಹಾಲ್‌ನಲ್ಲಿ ಯಶಸ್ವಿಯಾಗಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಪದವಿ ಶಿಕ್ಷಣಕ್ಕೆ ಹೊಸದಾಗಿ ಪ್ರವೇಶಾತಿ ಪಡೆದ ಸಸ್ಯಶಾಸ್ತ್ರ ವಿಭಾಗದ ಮೊದಲ ವರ್ಷದ ವಿದ್ಯಾರ್ಥಿಗಳನ್ನು ವಿದ್ಯುಕ್ತವಾಗಿ ಸ್ವಾಗತಿಸುವುದರೊಂದಿಗೆ, ವಿದ್ಯಾರ್ಥಿ ಪ್ರತಿನಿಧಿಗಳ ಪದಗ್ರಹಣ ಸಮಾರಂಭವು ನೆರವೇರಿತು.

ವಿಭಾಗದ ಮುಖ್ಯಸ್ಥರು ಹಾಗೂ ಕಾಲೇಜಿನ ಪ್ರಾಂಶುಪಾಲರೂ ಆಗಿರುವ ಡಾ. ಬಿ.ಎ. ಕುಮಾರ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಕಾರ್ಯಚಟುವಟಿಕೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ಗೋಡೆ ಬರಹದ ಭಿತ್ತಿಪತ್ರಿಕೆ ಅನಾವರಣಗೊಳಿಸಲಾಯಿತು.ಕಾರ್ಯಕ್ರಮದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಪಕರುಗಳಾದ ಕು.ಶಕುಂತಲಾ, ಅಭಿಲಾಷ್ ಕೆ.ಎಸ್., ಸ್ವಾತಿ, ಮಂಜುಶ್ರೀ ಇವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಕು.ಮಂದಾರ ಸ್ವಾಗತಿಸಿ, ಕು.ಶ್ಲಾಘನಾ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ದೀಕ್ಷಾ ಹಾಗೂ ಕಾರ್ತಿಕ್ ನಿರೂಪಿಸಿದರು.

p>

LEAVE A REPLY

Please enter your comment!
Please enter your name here