Site icon Suddi Belthangady

ಕೊರಂಜ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ-2023 ಹಾಗೂ ವರ್ಗಾವಣೆಗೊಂಡ ಶಿಕ್ಷಕಿಗೆ ಸನ್ಮಾನ

ಗೇರುಕಟ್ಟೆ: ಸೆ.13ರಂದು ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ, ಸಮೂಹ ಸಂಪನ್ಮೂಲ ಕೇಂದ್ರ, ಗುರುವಾಯನಕೆರೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಕೊರಂಜ ಶಾಲೆ, ಬೆಳ್ತಂಗಡಿ ತಾಲೂಕು ಗುರುವಾಯನಕೆರೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ–2023 ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.

ಗುರುವಾಯನಕೆರೆ ವಲಯದ ಸಿ.ಆರ್.ಪಿ.ರಾಜೇಶ್ ಪಿ.ಪ್ರಸ್ತಾವಿಕವಾಗಿ ಮಾತನಾಡಿದರು.ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.
ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ಮಾತನಾಡುತ್ತಾ ಈ ಶಾಲೆಯ ಹಿರಿಯ ವಿಧ್ಯಾರ್ಥಿಯಾಗಿ ಉತ್ತಮ ಭವಿಷ್ಯ ರೂಪಿಸಲು ನನಗೆ ಸಾಧ್ಯವಾಗಿದೆ.ಹಾಗೆಯೇ ಇಲ್ಲಿ ವಿಧ್ಯಾಭ್ಯಾಸ ಪಡೆದ ಹೆಚ್ಚಿನವರು ಉನ್ನತ ವ್ಯಕ್ತಿಗಳಾಗಿದ್ದಾರೆ.ಆದುದರಿಂದ ಶಾಲೆಯಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ, ಕಳಿಯ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಕುಮಾರ್ ಬಿ.ಸಭಾಧ್ಯಕ್ಷತೆ ವಹಿಸಿದರು.

ದ.ಕ.ಜಿ.ಶಾಮಿಯಾನ ಮಾಲೀಕರ ಸಂಘ ಬೆಳ್ತಂಗಡಿ ಘಟಕ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ಧನ ಗೌಡ ಕೆ.ಗೇರುಕಟ್ಟೆ ಆಟೋ ಚಾಲಕರ ಸಂಘದ ಅಧ್ಯಕ್ಷ ಜಿ.ವೈ.ಬದ್ರುದ್ಧಿನ್, ಗುರುವಾಯನಕೆರೆ ಸ.ಹಿ.ಪ್ರಾ.ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಅಬ್ದುಲ್ ಲತೀಫ್ ಸಾಹೇಬ್, ಸರಕಾರಿ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಡ್ವರ್ಡ್ ಡಿ ಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಕೊರಂಜ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಗುರುವಾಯನಕೆರೆ ವಲಯದ ಒಟ್ಟು 15 ಶಾಲೆಯ ಸುಮಾರು 250 ವಿದ್ಯಾರ್ಥಿಗಳು ವಿವಿಧ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ವಿವಿಧ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸಮೂಹ ಸಂಪನ್ಮೂಲ ಕೇಂದ್ರ ಸರ್ವಸದಸ್ಯರು, ಅಧ್ಯಾಪಕ ವೃಂದ ಶಾಲಾಭಿವೃದ್ಧಿ, ಮೇಲುಸ್ತುವಾರಿ ಸಮಿತಿ ಪದಾಧಿಕಾರಿಗಳು, ಸ.ಉ.ಪ್ರಾ ಶಾಲೆ ಕೊರಂಜ ಶಾಲಾ ಮಾಜಿ ಅಧ್ಯಕ್ಷರು, ಸದಸ್ಯರು, ಹಾಲಿ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಪೋಷಕರು ಹಾಗೂ ವಿಧ್ಯಾಭಿಮಾನಿಗಳು ಭಾಗವಹಿಸಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಶಾಂತ ಎಸ್.ಸ್ವಾಗತಿಸಿ, ಸಹ ಶಿಕ್ಷಕಿ ಜಾನಕಿ ಪಟಗಾರ್ ಕಾರ್ಯ ನಿರೂಪಿಸಿದರು. ಸಹ ಶಿಕ್ಷಕಿ ಸಿಬುಲ್ ಪಾಯ್ಸ್ ಧನ್ಯವಾದವಿತ್ತರು.

ಸನ್ಮಾನ: ಕೊರಂಜ ಶಾಲೆಯಲ್ಲಿ ಕಳೆದ 13 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಪ್ರೇಮಲತಾ ಮಂಗಳೂರು ಸಮೀಪದ ಸರಕಾರಿ ಶಾಲೆಗೆ ವರ್ಗಾವಣೆಗೊಂಡಿರುವ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ, ಗೌರವಿಸಿದರು.

ಸನ್ಮಾನಿತರಾದ ಪ್ರೇಮಲತಾ ರವರು ಕಾರ್ಯನಿರ್ವಾಹಿಸಿದ ಕೊರಂಜ ಶಾಲೆಗೆ ಅಂದಾಜು 25 ಸಾವಿರ ಮೌಲ್ಯದ 5 ಮರದ ಕುರ್ಚಿಗಳನ್ನು ದೇಣಿಗೆಯಾಗಿ ನೀಡುವ ಮೂಲಕ ಶಾಲೆ ಅಭಿವೃದ್ಧಿ ಹೊಂದಲಿ ಎಂದು ಹೇಳಿದರು.

Exit mobile version