Site icon Suddi Belthangady

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜಿಲ್ಲಾ ಪಶು ಪಾಲನಾ, ಪಶು ವೈದ್ಯಕೀಯ ಇಲಾಖೆಗೆ 45 ದ್ರವಸಾರಜನಕ ಜಾಡಿಗಳ ವಿತರಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯದ ಅಭಿವೃದ್ಧಿ ವಿಭಾಗದಿಂದ ದ.ಕ.ಜಿಲ್ಲೆಯ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗೆ ಮಂಟಪದಲ್ಲಿ 45 ದ್ರವಸಾರಜನಕ ಜಾಡಿಗಳ ವಿತರಣೆಯ ಕಾರ್ಯಕ್ರಮ ಸೆ.13 ರಂದು ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ಜರಗಿತು.ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ.ಹೆಗ್ಗಡೆ ದ್ರವಸಾರಜನಕ ಜದಿಗಳನ್ನು ಹಸ್ತಾಂತರ ಮಾಡಿದರು.ಮುಖ್ಯ ಅತಿಥಿಗಳಾಗಿ ದ. ಕ. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಅರುಣ್ ಕುಮಾರ್ ಭಾಗವಹಿಸಿದ್ದರು.

ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್.ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಯೋಜನೆಯ ಕಾರ್ಯನಿರ್ವಾಹಕ ಅನಿಲ್ ಕುಮಾರ್, ಸಿರಿ ಸಂಸ್ಥೆಯ ನಿರ್ದೇಶಕ ಜನಾರ್ದನ, ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

ಪ್ರಾದೇಶಿಕ ನಿರ್ದೇಶಕರು ಆನಂದ ಸುವರ್ಣ ಸ್ವಾಗತಿಸಿದರು.ಸಮುದಾಯ ಅಭಿವೃದ್ಧಿ ವಿಭಾಗದ ತಾಂತ್ರಿಕ ಯೋಜನಾಧಿಕಾರಿ ಪುಷ್ಪರಾಜ್ ವಂದಿಸಿದರು.ಶುದ್ಧ ಗಂಗಾ ವಿಭಾಗದ ನಿರ್ದೇಶಕ ಶಿವಾನಂದ ಆಚಾರ್ಯ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು, ಯೋಜನೆಯ ಕಾರ್ಯಕರ್ತರು, ಶ್ರೀ ಕ್ಷೇತ್ರ ಧರ್ಮಸ್ಥಳದ ವಿವಿಧ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು

Exit mobile version