Site icon Suddi Belthangady

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ

ನೆತ್ತರ: ಸೆ.9ರಂದು ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು ವಿವಿಧ ಪೌಷ್ಟಿಕ ಖಾದ್ಯಗಳನ್ನು ತಯಾರಿಸಿ ತಂದರು.ಆರೋಗ್ಯ ಕಾರ್ಯಕರ್ತೆ ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು, ಆರೋಗ್ಯಕಾರ್ಯಕರ್ತೆ, ಆಶಾ ಕಾರ್ಯಕರ್ತೆ ಶಾಲಾ ಮುಖ್ಯೋಪಾಧ್ಯಾಯರು, ಶಕ್ತಿ ನವೋದಯ ಸಂಘದವರು ಹಾಗೂ ಪೋಷಕರು ಉಪಸ್ಥಿತರಿದ್ದು ಸಹಕರಿಸಿದರು.

ಶಕ್ತಿ ನವೋದಯ ಸಂಘದ ಪರವಾಗಿ ಗರ್ಭಿಣಿಯರಿಗೆ ಹೂ ಹಣ್ಣು ಸಿಹಿತಿಂಡಿ ನೀಡಿ ಗೌರವಿಸಲಾಯಿತು.ಅಂಗನವಾಡಿ ಕಾರ್ಯಕರ್ತೆ ಗೀತಲತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.ಅಂಗನವಾಡಿ ಸಹಾಯಕಿ ಸಹಕರಿಸಿದರು.

Exit mobile version