ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಶಾಲಾ ಮೈದಾನದಲ್ಲಿ ನಡೆದ ಶಾಲಾ ಪ್ರಾರ್ಥನಾ ವೇಳೆ ಆಚರಿಸಲಾಯಿತು.ವಿದ್ಯಾರ್ಥಿನಿ ರೀಶೆಲ್ ಬೆನ್ನಿಸ್ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು.
ಎಲ್ಲ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರತಿಜ್ಞಾ ವಿಧಿಯಲ್ಲಿ ಪಾಲ್ಗೊಂಡಿದ್ದರು.ವಿದ್ಯಾರ್ಥಿನಿ ರಿಯೋನ ಸೀಕ್ವೇರಾ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಹತ್ವವನ್ನು ತಿಳಿಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ವಂ.ಫಾ.ಕ್ಲಿಫರ್ಡ್ ಪಿಂಟೋರವರು ಭಾರತ ಸಂವಿಧಾನದ ಮಹತ್ವವನ್ನು ತಿಳಿಸಿ ನಾವೆಲ್ಲರೂ ಸಂವಿಧಾನಕ್ಕೆ ಬದ್ಧವಾಗಿ ನಡೆಯಬೇಕೆಂದು ನುಡಿದರು.
p>