Site icon Suddi Belthangady

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

ಚಾರ್ಮಾಡಿ: ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಸೆ.15 ರಂದು ಮಾದಕ ವಸ್ತು ಗಾಂಜಾವನ್ನು ಸೇವಿಸುತ್ತಿದ್ದ ವ್ಯಕ್ತಿಯೋರ್ವನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಕಕ್ಕಿಂಜೆ ಚಿಬಿದ್ರೆ ನಿವಾಸಿಯಾದ ಮಹಮ್ಮದ್ ನಿಫಾಲ್ (25) ಎಂಬಾತನು ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವುದನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು, ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಆತನು ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವುದಾಗಿ ದೃಢಪಟ್ಟಿರುತ್ತದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 67/2023 ಕಲಂ: 27(ಬಿ) ಎನ್ ಡಿಪಿಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Exit mobile version