ಪಟ್ರಮೆ: ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ

0

ಪಟ್ರಮೆ: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಧರ್ಮಸ್ಥಳ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಹಾಗೂ ಸಿಬ್ಬಂದಿಗಳಿ ದಾಳಿ ನಡೆಸಿದ್ದು, ಕೋಳಿ ಅಂಕದಲ್ಲಿ ನಿರತರಾಗಿದ್ದ ಸತೀಶ, ಜಿತೇಂದ್ರ, ಶೀನ ಮುಗೇರ, ಅಣ್ಣು, ಶ್ರೀಧರ, ಮನೋಜ ಕುಮಾರ್, ಸತೀಶ್, ಸುಧಾಕರ ಎಂಬ ಹೆಸರಿನ 8 ಮಂದಿಯನ್ನು ವಶಕ್ಕೆ ಪಡೆದುಕೊಂಡು ಒಟ್ಟು ನಗದು ರೂಪಾಯಿ 2,350/-, 4 ಹುಂಜ ಕೋಳಿಗಳು ಒಂದು ಓಮಿನಿ ಕಾರು, ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ: 68/2023 ಕಲಂ: 87 ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here