ಬೆಳ್ತಂಗಡಿ: ಉಜಿರೆಯ ಅರಿಪ್ಪಾಡಿ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ ಉಜಿರೆ ಇದರ 2022-23ನೇ ಸಾಲಿನ ಸರ್ವ ಸದಸ್ಯರ ಪ್ರಥಮ ವಾರ್ಷಿಕ ಸಾಮಾನ್ಯ ಮಹಾಸಭೆಯು ಸೆ.16ರಂದು ಸಂಘದ ಅಧ್ಯಕ್ಷೆ ಸಾವಿತ್ರಿ ರೈ ಅವರ ಅಧ್ಯಕ್ಷತೆಯಲ್ಲಿ ಉಜಿರೆಯ ಅರಿಪ್ಪಾಡಿ ಮಠ ಸಂಕೀರ್ಣದಲ್ಲಿ ನಡೆಯಿತು.
ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಮಹಿಳಾ ಸಹಕಾರಿ ಸಂಘವು ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚು ಮಹಿಳೆಯರು ಈ ಸಂಘದ ಸದಸ್ಯತ್ವನ್ನು ಪಡೆದುಕೊಳ್ಳಬೇಕು ಎಂದು ಆಶಿಸಿದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರ್ಣಗೌರಿ ಅವರು ವಾರ್ಷಿಕ ವರದಿ ವಾಚಿಸಿದರು.ಉಪಾಧ್ಯಕ್ಷೆ ರಾಜಶ್ರೀ ಎಸ್. ಹೆಗ್ಡೆ ಸ್ವಾಗತಿಸಿ, ನಿರ್ದೇಶಕಿ ಹೇಮಲತಾ ವಂದಿಸಿದರು.ರವಿಜಾ ರಾವ್ ಪ್ರಾರ್ಥಿಸಿದರು.
p>