ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಗೆ ವಿಕಾಸ್ ಶ್ರೀವಾಸ್ತವ್, ಸರಕಾರದ ಅಧೀನ ಕಾರ್ಯದರ್ಶಿ, ಕೇಂದ್ರ ಕುಡಿಯುವ ನೀರು ಮತ್ತು ನೈರ್ಮ ಲ್ಯ ಇಲಾಖೆಯ ಅಧಿಕಾರಿಗಳು ಸೆ.18 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ತ್ಯಾಜ್ಯ ಸಂಪನ್ಮೂಲ ಘಟಕ, ಪ್ಲಾಸ್ಟಿಕ್ ಮರು ಉತ್ಪಾದನಾ ಘಟಕ ಮತ್ತು ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಘಟಕದ ಕಾರ್ಯನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು.
ಬಳಿಕ, ಉಜಿರೆ ಗ್ರಾಮ ಪಂಚಾಯತ್ ಕಚೇರಿಗೆ ಹಾಗೂ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಕ್ಕೆ ಸಂದರ್ಶಿಸಿ, ಗ್ರಾಮ ಪಂಚಾಯತ್ ನ ಕಾರ್ಯನಿರ್ವಹಣೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ , ಗ್ರಾಮ ಪಂಚಾಯತ್ ಸದಸ್ಯರು, ಮಾನ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಇಂಜಿನಿಯರ್ ನಿತಿನ್ ಕುಮಾರ್, ಸಹಾಯಕ ಇಂಜಿನಿಯರ್ ಹರ್ಷಿತ್, ಜಿಲ್ಲಾ ಸಂಯೋಜಕ ಡೊಂಬಯ್ಯ, ಕಾರ್ಯದರ್ಶಿ ಶ್ರವಣ್ ಕುಮಾರ್, ಸ್ವಚ್ಛತಾ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
p>