ಉಜಿರೆ ಅನುಗ್ರಹ ಪ.ಪೂ.ಕಾಲೇಜಿನ ಪ್ರಾಂಶುಪಾಲ ಫಾ.ವಿಜಯ್ ಲೋಬೊರವರಿಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ-2023’

0

ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಮಂಗಳೂರು ಇದರ ವತಿಯಿಂದ ದಿನಾಂಕ 17-09-2023ರಂದು ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜು, ಮಂಗಳೂರು ಇಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಉಜಿರೆ ಅನುಗ್ರಹ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ ಇವರ ದಕ್ಷ ಹಾಗೂ ಪ್ರಾಮಾಣಿಕ ಸೇವಾ ಮನೋಭಾವನೆಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ 2023 ಲಭಿಸಿರುತ್ತದೆ. ಪೂಜ್ಯರು ಸುಧೀರ್ಘ 11 ವರ್ಷಗಳ ಕಾಲ ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಶೈಕ್ಷಣಿಕ ಶ್ರೇಯೋಭಿವೃದ್ಧಿಯಲ್ಲಿ ಮಹತ್ತರ ಪಾತ್ರವಹಿಸಿ ಎಲ್ಲರ ಮೆಚ್ಚುಗೆ ಪಡೆದಿರುತ್ತಾರೆ.

ಇವರಿಗೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಚಾಲಕರು, ಆಡಳಿತ ಮಂಡಳಿ, ಬೋಧಕ- ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಹೃತ್ಪೂರ್ವಕ ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here