Site icon Suddi Belthangady

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳು

ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಮತ್ತು ಯುವಕರ ಜೀವನವನ್ನು ನಾಶ ಮಾಡುವ ಪ್ರಮುಖ ದುಷ್ಟಶಕ್ತಿಗಳಾದ ಮಾದಕ ದ್ರವ್ಯ ವ್ಯಸನ ಮತ್ತು ಮೊಬೈಲ್ ಬಳಕೆಯ ಬಗ್ಗೆ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಸೆ.16ರಂದು ಜಾಗೃತಿ ಶಿಬಿರವನ್ನು ಏರ್ಪಡಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಪೋಲಿಸ್ ಇಲಾಖೆಯ ಕಾನ್‌ಸ್ಟೇಬಲ್ ಚೈತ್ರಾರವರು ಪ್ರಚಲಿತ ದಿನಗಳಲ್ಲಿ ಈ ಛಟಕ್ಕೆ ಹೇಗೆ ಬಲಿಯಾಗುತ್ತಾರೆ.ಇದರಿಂದ ಆಗುವ ಸಮಸ್ಯೆಗಳು, ಮಾನಸಿಕ ಖಿನ್ನತೆಗೆ ಒಳಗಾಗಿ ಆಗುವ ಅಪರಾಧಗಳು ಇದರ ಬಗ್ಗೆ ಕೆಲವು ನೈಜ ಉದಾಹರಣೆಗಳ ಮೂಲಕ ವಿದ್ಯಾರ್ಥಿಗಳ ಮನಮುಟ್ಟುವ ರೀತಿಯಲ್ಲಿ ತಿಳಿಸಿದರು.ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಹೆಡ್ ಕಾನ್‌ಸ್ಟೇಬಲ್ ಗಂಗಾಧರ್ ಕೂಡ ಸ್ಪಂದಿಸಿದರು.ಶಿಕ್ಷಕಿ ಥಿಯೋಫಿಲ ಕಾರ್ಯಕ್ರಮವನ್ನು ನಿರೂಪಿಸಿದರು.ದೈಹಿಕ ಶಿಕ್ಷಕರು ವಂದಿಸಿದರು.

Exit mobile version